ಉಡುಪಿ: ಇವತ್ತು ಪಿಯು ಪರೀಕ್ಷೆ ಪ್ರಾರಂಭಗೊಂಡಿದ್ದು ಉಡುಪಿಯ ಹಿಜಾಬ್ ಹೋರಾಟಗಾರ್ತಿಯರು ಕೊನೆ ಹಂತದ ಹೋರಾಟಕ್ಕೆ ಇಳಿದಿದ್ದಾರೆ.
ಹಿಜಾಬ್ ಹೋರಾಟದ ಮುಂಚೂಣಿಯಲ್ಲಿದ್ದ ಆಲಿಯಾ ಮತ್ತು ರೇಶಂ ಇವತ್ತು ಕೊನೆಗಳಿಗೆಯಲ್ಲಿ ಹಾಲ್ ಟಿಕೆಟ್ ಪಡೆದುಕೊಂಡಿದ್ದಾರೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರವಾದ ವಿದ್ಯೋದಯ ಕಾಲೇಜಿಗೆ ಆಗಮಿಸಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ತಮಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿನಂತಿಸಿದ್ದಾರೆ.
ಆದರೆ ಹಿಜಾಬ್ ತೊಟ್ಟು ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ.ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಯ ಅಧ್ಯಾಪಕ ವೃಂದ ಮತ್ತು ಇಬ್ವರು ವಿದ್ಯಾರ್ಥಿನಿಯರ ಮಧ್ಯೆ ಮಾತುಕತೆ ನಡೆಯುತ್ತಿದೆ.ಕಾಲೇಜಿಗೆ ಪೊಲೀಸರು ಮತ್ತು ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ಆಗಮಿಸಿದ್ದಾರೆ.ಉಳಿದಂತೆ ಎಲ್ಲೆಡೆ ಶಾಂತಿಯುತವಾಗಿ ಪರೀಕ್ಷೆ ಗಳು ನಡೆಯುತ್ತಿವೆ.
PublicNext
22/04/2022 11:36 am