ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಿಯುಸಿ ಪರೀಕ್ಷೆಗೆ ಸರ್ವಸಿದ್ಧತೆ: ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಇವತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಂದು ಉಡುಪಿಯ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಇವತ್ತಿನಿಂದ ಮೇ 18ರ ತನಕ ಪರೀಕ್ಷೆಗಳು ನಡೆಯಲಿವೆ.ಜಿಲ್ಲೆಯಲ್ಲಿ ಒಟ್ಟು 28 ಪರೀಕ್ಷಾ ಕೇಂದ್ರಗಳಿವೆ. ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ.ಸಿಸಿ ಕ್ಯಾಮೆರಾ ಅಳವಡಿಕೆ, ಸಿಬ್ಬಂದಿ ನೇಮಕ ಮತ್ತು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ.ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಿದ್ದು ಜಿಲ್ಲೆಯಲ್ಲಿ ಶಾಂತಿಯುತವಾಗಿ ಪರೀಕ್ಷೆಗಳು ನಡೆಯುತ್ತಿವೆ ಎಂದು ಹೇಳಿದರು.

Edited By : Shivu K
Kshetra Samachara

Kshetra Samachara

22/04/2022 01:23 pm

Cinque Terre

9.96 K

Cinque Terre

0

ಸಂಬಂಧಿತ ಸುದ್ದಿ