ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಿಜಾಬ್ ಗಾಗಿ ಕೋರ್ಟ್ ಮೆಟ್ಟಿಲೇರಿದ್ದ ಆರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು

ಉಡುಪಿ : ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಆರು ಜನ ವಿದ್ಯಾರ್ಥಿನಿಯರು ಪ್ರಥಮ ಮತ್ತು ದ್ವಿತೀಯ ಪಿಯು ಅಂತಿಮ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅಲ್ಮಾಸ್ ಎ.ಎಚ್., ಹಝಾ ಶಿಫಾ, ಆಯಿಷಾ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಇವರಲ್ಲಿ ಅಲ್ಮಾಸ್ ಶುಕ್ರವಾರ ಸಂಜೆ ಕಾಲೇಜಿಗೆ ಆಗಮಿಸಿ ಹಾಲ್ ಟಿಕೆಟ್ ಪಡೆದುಕೊಂಡು ಹೋಗಿದ್ದಾರೆ. ಆದರೆ ಉಳಿದ ಇಬ್ಬರು ಇಂದು ಬೆಳಗ್ಗೆ ಕೂಡ ಹಾಲ್ ಟಿಕೆಟ್ ಪಡೆದುಕೊಳ್ಳಲು ಆಗಮಿಸಿಲ್ಲ ಎಂದು ತಿಳಿದುಬಂದಿದೆ.

ಒಟ್ಟಾರೆ ಉಡುಪಿ ಸರಕಾರಿ ಬಾಲಕಿಯರ ಕಾಲೇಜಿನ ಆರು ಜನ ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥನಿಯರು ಕೊನೆ ಕ್ಷಣದ ತನಕ ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿ ಇದೀಗ ಅಂತಿಮ ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ.

Edited By : PublicNext Desk
PublicNext

PublicNext

23/04/2022 01:08 pm

Cinque Terre

26.39 K

Cinque Terre

60

ಸಂಬಂಧಿತ ಸುದ್ದಿ