ಮುಲ್ಕಿ: ಮಳೆಗಾಲದ ಮೊದಲೇ ಶಾಲೆ ಆರಂಭಗೊಂಡಿದ್ದು ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಭಾರತೀಯ ಅಂಚೆ ಇಲಾಖೆಯ ಸಿಬ್ಬಂದಿ ವಲೇರಿಯನ್ ರೋಡ್ರಿಗಸ್ ಹೇಳಿದರು.
ಮುಲ್ಕಿ ಮೆಡಲಿನ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಪ್ರಯುಕ್ತ ದೀಪಬೆಳಗಿಸಿ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಾಥಮಿಕ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಶ್ರೀಕಾಂತ್ ಭಟ್ ಮಾತನಾಡಿ, ವಿದ್ಯಾರ್ಥಿಗಳ ಏಕಾಗ್ರತೆಯೊಂದಿಗೆ ಶಿಕ್ಷಣ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಶೈಕ್ಷಣಿಕ ಸಾಧನೆ ಮುಂದಿನ ಜೀವನದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.
ಈ ಸಂದರ್ಭ ಹಿರಿಯ ಶಿಕ್ಷಕ ಮಧುಕರ ನಾಯಕ್ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶೈಕ್ಷಣಿಕ ಮಾರ್ಗದರ್ಶನ ನೀಡಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಪ್ರೆಸಿಲ್ಲಾ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಮರಿಸ್ಸಾ ಲೂಸಿ ಹಾಜರಿದ್ದರು. ಕಾರ್ಯಕ್ರಮದ ಮೊದಲು ವಿಶೇಷ ಮೆರವಣಿಗೆಯೊಂದಿಗೆ ವಿದ್ಯಾರ್ಥಿಗಳನ್ನು ಹೂ ನೀಡಿ ಸ್ವಾಗತಿಸಲಾಯಿತು.
Kshetra Samachara
16/05/2022 05:57 pm