ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು : ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ವಿವೇಕಾನಂದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಪುತ್ತೂರು : ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಬಾರಿ ಉತ್ತಮ ಸಾಧನೆ ತೋರುವ ಮೂಲಕ ಗುರುತಿಸಿಕೊಂಡಿದ್ದಾರೆ.

ವಿವೇಕಾನಂದ ಶಾಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ಸಾಧನೆಯನ್ನು ತೋರಿದ್ದು,ವಿದ್ಯಾರ್ಥಿಗಳಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು, ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಸೇರಿ ಅಭಿನಂದಿಸಿದ್ದಾರೆ.

ಶಾಲೆಯ ಮೂರು ವಿದ್ಯಾರ್ಥಿಗಳು 626 ರಲ್ಲಿ 625 ಅಂಕಗಳನ್ನು ಗಳಿಸಿದ್ದು, ನಾಲ್ವರು ವಿದ್ಯಾರ್ಥಿಗಳು 624 ಅಂಕಗಳನ್ನು ಪಡೆದಿದ್ದಾರೆ. ಅಭಿಜ್ಞಾ, ಆತ್ಮೀಯ ಕಶ್ಯಪ್, ಅಭಯ್ ಶರ್ಮಾ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾಗಿದ್ದು, ಫಲಿತಾಂಶ ಅನಿರೀಕ್ಷಿತವಾಗಿತ್ತು ಎನ್ನುವ ಅನಿಸಿಕೆ ಹಂಚಿಕೊಂಡಿದ್ದಾರೆ. ಪರೀಕ್ಷೆ ತಯಾರಿಯನ್ನು ಎಲ್ಲರಂತೆ ಸಾಮಾನ್ಯವಾಗಿ ಮಾಡಿದ್ದು, ಓದಿದ್ದನ್ನು ಮನದಟ್ಟು ಮಾಡಿ ಬರೆದ ಫಲಿತಾಂಶ ಇದಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Edited By :
Kshetra Samachara

Kshetra Samachara

19/05/2022 10:27 pm

Cinque Terre

5.08 K

Cinque Terre

0

ಸಂಬಂಧಿತ ಸುದ್ದಿ