ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಶಿಕ್ಷಕ ದಂಪತಿಯ ಪುತ್ರಿ ಟಾಪರ್: ವೈದ್ಯೆಯಾಗುವ ಕನಸು

ಬೈಂದೂರು:ತಾಲೂಕಿನ ಕಿರಿಮಂಜೇಶ್ವರದ ಸಾಂದೀಪನಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲಿನ ಅಕ್ಷತಾ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೇ ಟಾಪರ್ ಆಗಿದ್ದಾರೆ.

ಇವರು ಹಾಲೂರು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗೇಶ್ ನಾಯ್ಕ ಹಾಗೂ ನಾವುಂದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶಾಲಿನಿ ನಾಯ್ಕ ದಂಪತಿ ಪುತ್ರಿ.

ಸಾಧನೆ ಪ್ರತಿಕ್ರಿಯಿಸಿರುವ ಅಕ್ಷತಾ, ಈ ನಿರೀಕ್ಷಿತ ಸಾಧನೆಯಿಂದ ತುಂಬಾ ಖಷಿಯಾಗಿದೆ. ಪ್ರತಿಯೊಂದು ವಿಷಯವನ್ನು ಗಮನ ಇಟ್ಟು ಕೇಳಿ ಅರ್ಥ ಮಾಡಿಕೊಂಡು ಓದುತ್ತಿದ್ದೆ. ಓದುವುದರಲ್ಲಿ ಶಿಕ್ಷಕರ ಮಾರ್ಗದರ್ಶನ ಅನುಸರಿಸುತ್ತಿದ್ದೆ. ಕಠಿಣ ಪರಿಶ್ರಮ ಹಾಗೂ ಬದ್ಧತೆಯಿಂದ ಸಾಧನೆ ಮಾಡಲು ಸಾಧ್ಯವಿದೆ. ಮುಂದೆ ಪಿಯುಸಿಯಲ್ಲಿ ಸೈನ್ಸ್ ಪಿಸಿಎಂಬಿ ಪಡೆದು ವೈದ್ಯೆಯಾಗಿ ಜನ ಸೇವೆ ಮಾಡುವ ಗುರಿ ಹೊಂದಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

20/05/2022 04:21 pm

Cinque Terre

5.35 K

Cinque Terre

0

ಸಂಬಂಧಿತ ಸುದ್ದಿ