ಕುಂದಾಪುರ:ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಅಧ್ಯಯನ ಕೌಶಲ ಕುರಿತು ಶೈಕ್ಷಣಿಕ ಕಾರ್ಯಾಗಾರ ನಡೆಯಿತು.
ಈ ಕಾರ್ಯಾಗಾರವನ್ನು ಖ್ಯಾತ ಸಂಪನ್ಮೂಲ ವ್ಯಕ್ತಿ ಡಾ| ಜಗದೀಶ್ ಜೋಗಿಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಜೀವನದಲ್ಲಿ ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ಉತ್ತಮ ಗುರಿ ಮತ್ತು ಯೋಜನೆ ಬಹಳ ಮುಖ್ಯವಾದುದು. ಹಾಗಾಗಿ ಉತ್ತಮ ಗುರಿಯೊಂದಿಗೆ ತಮ್ಮನ್ನು ತಾವೇ ಸ್ವಯಂ ಪ್ರೇರೇಪಿಸುವ ಮೂಲಕ ಈಗಿಂದಲೇ ಕಲಿಕೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ತಿಳಿಸಿದರು. ಪ್ರಾಂಶುಪಾಲರಾದ ಚಿಂತನಾ ರಾಜೇಶ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕಿ ಗೀತಾರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
Kshetra Samachara
14/06/2022 05:00 pm