ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಹಿರಿಯ ವಿದ್ಯಾರ್ಥಿ ಸಂಘ ಪದವಿ ಪೂರ್ವ ಕಾಲೇಜು ಕಟೀಲು ಆಶ್ರಯದಲ್ಲಿ ಕಟೀಲಿನ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ಕಟೀಲಿನ ಪ್ರೌಢಶಾಲಾ ಸಭಾಂಗಣದಲ್ಲಿ ಇಂದು ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಮಿತಿ ಸಂಚಾಲಕ ಹಾಗೂ ಕಟೀಲು ದೇವಳದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಶಾಲೆ ವತಿಯಿಂದ ಗೌರವಿಸಲಾಯಿತು.
ಕಟೀಲು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕಯ್ಯ ಸಾಲ್ಯಾನ್ ಕೊಂಡೇಲ, ಕಟೀಲು ಪ್ರೌಢಶಾಲಾ ನಿವೃತ್ತ ಉಪ ಪ್ರಾಚಾರ್ಯ ಉಮೇಶ್ ರಾವ್ ಎಕ್ಕಾರು, ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
19/06/2022 09:21 pm