ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು: ಮಾದರಿ ಶಾಲೆಗಳ ಸ್ಥಾಪನೆ- ಸಚಿವ ಎಸ್. ಅಂಗಾರ

ಪುತ್ತೂರು: ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಆಝಾದ್‌ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಅವರು ಶನಿವಾರ ಪುತ್ತೂರು ನಗರದ ಪಡೀಲ್‌ನಲ್ಲಿ ರೂ. 2.35 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಮೌಲಾನಾ ಆಝಾದ್ ಮಾದರಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ 2017-18 , 19-20 ನೇ ಸಾಲಿನಲ್ಲಿ 100 ಕ್ಕೂ ಮಿಕ್ಕಿದ ಮೌಲಾನಾ ಆಝಾದ್ ಮಾದರಿ ಶಾಲೆಗಳನ್ನು ಆರಂಭಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ 8 ಶಾಲೆಗಳಿದ್ದು, 2400 ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

ಆರ್ಥಿಕ ಪರಿಸ್ಥಿತಿಯಿಂದಾಗಿ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರವು ಇಂತಹ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

Edited By : Nagesh Gaonkar
Kshetra Samachara

Kshetra Samachara

02/07/2022 03:44 pm

Cinque Terre

7.69 K

Cinque Terre

0

ಸಂಬಂಧಿತ ಸುದ್ದಿ