ಮುಲ್ಕಿ: ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪಿಯುಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ಶಾಲೆಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ಕಾಲೇಜು ಈ ಬಾರಿ ಸುವರ್ಣ ಮಹೋತ್ಸವ ವರ್ಷ ಆಚರಿಸುತ್ತಿದ್ದು ವಿದ್ಯಾರ್ಥಿಗಳು ಓದಿನ ಜೊತೆಗೆ ಶಿಸ್ತು ಬದ್ಧ ಜೀವನದ ಮೂಲಕ ಕಾಲೇಜಿನ ಅಭಿವೃದ್ಧಿಗೆ ಸಹಕರಿಸಿ ಕೀರ್ತಿವಂತರಾಗಿ ಎಂದು ಶುಭ ಹಾರೈಸಿದರು.
ಮುಲ್ಕಿ ನಗರ ಪಂಚಾಯತ್ ಸದಸ್ಯ ಹರ್ಷರಾಜ ಶೆಟ್ಟಿ, ವೆಂಕಟೇಶ ಪುತ್ರನ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ, ಕಾಲೇಜಿನ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಧೀರಜ್, ಕಾರ್ಯದರ್ಶಿ ಆದಿತ್ಯ, ಮತ್ತಿತರರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪಿಯುಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಹನುಮಂತಿ (ಕಲಾ ವಿಭಾಗ), ಪುನೀತ್ (ವಿಜ್ಞಾನ), ಮಹಾಲಕ್ಷ್ಮಿ , ಸುಶ್ಮಿತಾ(ವಾಣಿಜ್ಯ) ರವರನ್ನು ಗೌರವಿಸಲಾಯಿತು.
ಉಪನ್ಯಾಸಕ ರಮಾನಂದ ನಿರೂಪಿಸಿದರು.ಉಪನ್ಯಾಸಕಿ ಲಿಡಿಯ ಬ್ರಾಗ್ಸ್ ಧನ್ಯವಾದ ಅರ್ಪಿಸಿದರು.
Kshetra Samachara
28/07/2022 03:20 pm