ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ತಾಲೂಕುಗಳಲ್ಲಿ ನಿನ್ನೆ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ.ಈ ಹಿನ್ನಲೆಯಲ್ಲಿ ಎರಡೂ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಕುಂದಾಪುರ ಸಹಾಯಕ ಕಮೀಷನರ್ ಕೆ.ರಾಜು ಆದೇಶ ಹೊರಡಿಸಿದ್ದಾರೆ.
ಕಳೆದ ರಾತ್ರಿಯಿಂದ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಗ್ಗು ಪ್ರದೇಶಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.
Kshetra Samachara
02/08/2022 09:02 am