ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಮಲ್ಪೆಯ ಕರಾವಳಿ ಕಾವಲು ಹೆಡ್ ಕಾನ್ ಸ್ಟೇಬಲ್ ಸಂತೋಷ್ ಶೆಟ್ಟಿಗೆ ಪಿಎಚ್‌ಡಿ ಪದವಿ

ಮಲ್ಪೆ: ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯ ವಾಹನ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ ಸ್ಟೇಬಲ್ ಸಂತೋಷ್ ಶೆಟ್ಟಿ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಲಭಿಸಿದೆ.

ಸಂತೋಷ್ ಶೆಟ್ಟಿ ಇವರು ಮಂಡಿಸಿದ 'ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ- ಒಂದು ಅಧ್ಯಯನ' ಎಂಬ ಸಂಶೋಧನಾ ಪ್ರಬಂಧಕ್ಕೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪಿಹೆಚ್‌ಡಿ ಪದವಿ ನೀಡಿದ್ದು, ಇತ್ತೀಚೆಗೆ ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಕೇಂದ್ರ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಇವರಿಂದ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ಪಡೆದಿದ್ದಾರೆ.

Edited By : PublicNext Desk
Kshetra Samachara

Kshetra Samachara

03/08/2022 09:41 pm

Cinque Terre

9.11 K

Cinque Terre

0