ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಎಸ್‌ಡಿಎಂಸಿ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರ

ಕುಂದಾಪುರ: ಒಂದು ಊರಿನ ದೇವಸ್ಥಾನದ ರಥವನ್ನು ಒಬ್ಬರಿಂದ ಎಳೆಯಲು ಸಾಧ್ಯವಿಲ್ಲ. ಅದೇ ರೀತಿಯಲ್ಲಿ ನಮ್ಮೂರಿನ ಸರ್ವ ಧರ್ಮಗಳ ದೇಗುಲವಾಗಿರುವ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಕ್ಕಳಿಗೆ ಗುಣಮುಟ್ಟದ ಶಿಕ್ಷಣ ನೀಡುವಂತಾಗಬೇಕು ಎಂದು ಬಳ್ಕೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀಧರ ಉಡುಪ ಹೇಳಿದರು.

ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಘಟಕ, ಗ್ರಾಮ ಪಂಚಾಯತ್ ಬಳ್ಕೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಇವರ ಸಹಯೋಗದಲ್ಲಿ ಬಳ್ಕೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚಾಯತ್ ಮಟ್ಟದ ಸರಕಾರಿ ಶಾಲೆಗಳ ಎಸ್‌ಡಿ ಎಂಸಿ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗಿಡಕ್ಕೆ ನೀರರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಶಾಲೆಯ ಎಸ್‌ಡಿಎಂಸಿ ಸಮಿತಿಯ ಜೊತೆಗೆ ಹಳೆ ವಿದ್ಯಾರ್ಥಿಗಳು ಶಿಕ್ಷಣ ಪ್ರೇಮಿಗಳು ಊರಿನ ದಾನಿಗಳು ಸೇರಿಕೊಂಡು ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಕಾರ್ಯ ಪ್ರತಿ ಪಂಚಾಯತ್ ಮಟ್ಟದಲ್ಲಿ ಹಮ್ಮಿಕೊಂಡ ಇಂತಹ ಕಾರ್ಯಾಗಾರಗಳು ಶ್ಲಾಘನೀಯವಾದದ್ದು ಎಂದರು.

ಎಸ್‌ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ವೇದಿಕೆ ನಡೆದು ಬಂದ ದಾರಿ ಮತ್ತು ಮುಂದೆ ಇಡಬೇಕಾದ ಹೆಜ್ಜೆ ಕುರಿತು ಪ್ರಾಸ್ತಾವಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ನಿಶ್ಚಿತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾಲೂಕು ಅಧ್ಯಕ್ಷ ಅವನೀಶ್ ಹೊಳ್ಳ, ಜಿಲ್ಲಾ ಕಾರ್ಯದರ್ಶಿ ದೀಪಾ ಮಹೇಶ್, ತಾಲೂಕು ಕಾರ್ಯದರ್ಶಿ ಪ್ರಮೋದ ಕೆ. ಶೆಟ್ಟಿ, ಉಪಾಧ್ಯಕ್ಷ ರಾಜಶೇಖರ್ ಪುರಸಭಾ ಘಟಕದ ಅಧ್ಯಕ್ಷ ಅಶ್ವತ್ ಕುಮಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಿರಿಜಾ ಪೂಜಾರ್ತಿ, ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ಸೇರಿಗಾರ್, ರತ್ನ, ಸುಶೀಲ , ಸಂಜೀವ ಅಶೋಕ್ ಕಳ್ಳಿಗುಡ್ಡೆ , ಮೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಜು ಮೊಗವೀರ, ಸಂತೋಷ ಪೂಜಾರಿ ಬಳ್ಕೂರು, ರೇಣುಕಾ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಎಸ್.ವಿ ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣಾನಂದ ಶಾನುಭಾಗ್, ವರದ ಅಂಕದ ಕಟ್ಟೆ ರಫೀಕ್ ಕೋಡಿ, ಗೀತಾ ಕೋಣಿ ಭಾಗವಹಿಸಿದರು.

ಅಶ್ವತ್ ಕುಮಾರ್ ಆಶಯ ಗೀತೆ ಹಾಡಿದರು ಪವಿತ್ರ ಬಳ್ಕೂರು ಸ್ವಾಗತಿಸಿ, ಶಶಿ ಬಳ್ಕೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು, ಕಾರ್ಯಕ್ರಮದ ನಂತರ ಬಳ್ಕೂರು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Edited By : Nagaraj Tulugeri
Kshetra Samachara

Kshetra Samachara

18/08/2022 08:33 pm

Cinque Terre

2.93 K

Cinque Terre

0

ಸಂಬಂಧಿತ ಸುದ್ದಿ