ಕುಂದಾಪುರ: ಮಕ್ಕಳ ಪ್ರತಿಭೆಗೆ ಕನ್ನಡಿ ಹಿಡಿಯುವ ಕೆಲಸವನ್ನು ಸರ್ಕಾರದ ಯೋಜನೆಯಾದ ಪ್ರತಿಭಾ ಕಾರಂಜಿ ಮಾಡುತ್ತಿದೆ ಎಂದು ಐರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ ಹೇಳಿದರು.
ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಪ್ರತಿಭೆ ಅನಾವರಣಗೊಳ್ಳುವಲ್ಲಿ ಪೋಷಕರ ಪಾತ್ರ ಗಣನೀಯವಾದದ್ದು. ಈ ದಿಸೆಯಲ್ಲಿ ಪೋಷಕರು ಹೆಚ್ಚಿನ ಆಸಕ್ತಿ ವಹಿಸುವ ಅಗತ್ಯತೆ ಇದೆ. ಹಿಂದೆ ಕ್ರೀಡೆಗೆ ಈ ರೀತಿಯ ಸವಲತ್ತು ಸಹಕಾರ ಸಿಗುತ್ತಿರಲ್ಲಿಲ್ಲ. ಆದರೆ ಬದಲಾದ ಕಾಲಘಟ್ಟದಲ್ಲಿ ಆಧುನಿಕತೆ ಸ್ಪರ್ಶದ ನಡುವೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಗಳಿಗೆ ಉತ್ತೇಜನ ಸಿಗುತ್ತಿದೆ. ಇದರ ಪ್ರಯೋಜನ ಪಡೆದು ಸಾಧನೆಗೆ ಮುನ್ನುಡಿ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಮೊಂತಿ ವಹಿಸಿದ್ದರು.ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ತಾ. ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಟಿ ನಾಯಕ್, ಐರೋಡಿ ಗ್ರಾ.ಪಂ ಉಪಾಧ್ಯಕ್ಷ ನಟರಾಜ್ ಗಾಣಿಗ,ಸೇರಿದಂತೆ ಇತರರು ಉಪಸ್ಥಿತರಿದ್ದರು
Kshetra Samachara
26/08/2022 05:39 pm