ಗಂಗೊಳ್ಳಿ: ವಿವಿಧ ಶಾಲೆಗಳಲ್ಲಿ 30 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮತಿ ಎಂ. ಅವರ ಬೀಳ್ಕೊಡುಗೆ ಸಮಾರಂಭ ಶಾಲೆಯ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಯೋನಿವೃತ್ತಿ ಹೊಂದಿದ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸುಮತಿ ಎಂ. ಅವರನ್ನು ಶಾಲೆಯ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರಾದ ಬಿ.ರಾಘವೇಂದ್ರ ಪೈ, ಕೇಶವ ಖಾರ್ವಿ ಶುಭಾಶಂಸನೆಗೈದರು. ನಿವೃತ್ತ ಮುಖ್ಯಶಿಕ್ಷಕಿ ಸುಜಾತಾ, ಶಾಲೆಯ ಶಿಕ್ಷಕಿಯರಾದ ಅನುಷಾ ಎ.ಬಂಗೇರಾ, ಉಷಾ ಕುಮಾರಿ ನಿವೃತ್ತರ ಸೇವೆಯನ್ನು ಸ್ಮರಿಸಿ ಮಾತನಾಡಿದರು.
ಗ್ರಾ.ಪಂ ಸದಸ್ಯರಾದ ಸಖು ಉದಯ, ಶಾಂತಿ ಖಾರ್ವಿ, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಜಿ.ಆರ್. ಪ್ರಕಾಶ್, ಗ್ರಾಪಂ ಮಾಜಿ ಅಧ್ಯಕ್ಷೆ ಸುರೇಖಾ ಕಾನೋಜಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ರೇಣುಕಾ, ಮಾಜಿ ಉಪಾಧ್ಯಕ್ಷೆ ಶಾರದಾ ಪೂಜಾರಿ, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
Kshetra Samachara
02/09/2022 12:22 pm