ಉಡುಪಿ: ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ ಮತ್ತು ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿಯ ಜಂಟಿ ಆಶ್ರಯದಲ್ಲಿ "ಯಶಸ್ವಿ-ಭವಿಷ್ಯದ ಧ್ರುವತಾರೆ" ಎಂಬ ವಿದ್ಯಾರ್ಥಿ ವೃತ್ತಿ ಮಾರ್ಗದರ್ಶನ ಯೋಜನೆಯ ಉದ್ಘಾಟನೆ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ 90 ಶೇ. ಅಂಕ ಗಳಿಸಿದ ವಿದ್ಯಾಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಸೆ.4 ರಂದು ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಕೊಡವೂರು ವಾರ್ಡ್ ನ ನಗರಸಭಾ ಸದಸ್ಯ ವಿಜಯ್ ಕೊಡವೂರು ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರಿ ಕನ್ನಡ ಶಾಲೆಯ ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮ ಮತ್ತು ಶಾಲೆಗಳಿಗೆ ಉಚಿತ ಗುಂಪು ಅಪಘಾತ ವಿಮೆ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ 90% ಅಂಕ ಗಳಿಸಿದ ಉಡುಪಿ ಜಿಲ್ಲೆಯ 1000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದರು.
Kshetra Samachara
02/09/2022 04:38 pm