ಮುಲ್ಕಿ: ಇಲ್ಲಿಗೆ ಸಮೀಪದ ಕೆಎಸ್ ರಾವ್ ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಿವಗಿರಿ ಮಠದ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ಶ್ರೀ ನಾರಾಯಣ ಗುರುಗಳ ತತ್ವ, ಆದರ್ಶಗಳನ್ನು ಇಂದಿನ ಯುವ ಜನಾಂಗ ಮೈಗೂಡಿಸಿಕೊಳ್ಳಬೇಕು ಎಂದರು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಘವ ಸುವರ್ಣ ರವರು ವಹಿಸಿಕೊಂಡಿದ್ದರು. ಬೆಂಗಳೂರಿನ ಉದ್ಯಮಿ ಗಣೇಶ್ ಗುಜರಾತ್, ತಿಲಕ್ ಕುಮಾರ್ ಸಾಲ್ಯಾನ್ ಹಾಗೂ ಸಸಿಹಿತ್ಲು ಜಾನಪದ ಕಲಾವಿದ ಎಸ್. ಆರ್. ಪ್ರದೀಪ್, ಮಹಿಳಾ ಮಂಡಲದ ಅಧ್ಯಕ್ಷೆ ಚಂದ್ರಾಕ್ಷಿ ಎಸ್. ಸಾಲ್ಯಾನ್ ,ಜನಾರ್ದನ ಬಂಗೇರ, ಮಧುರ ಸುವರ್ಣ,ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು
ಎಸ್. ಎಸ್. ಎಲ್. ಸಿ ಹಾಗೂ ಪಿ ಯು ಸಿ. ಯ 5 ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ 40 ವಿದ್ಯಾರ್ಥಿಯರಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.
Kshetra Samachara
13/09/2022 02:21 pm