ಮುಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಪಡುಪಣಂಬೂರು ಗ್ರಾಪಂ, ದ.ಕ.ಜಿಲ್ಲಾ ಯುವಜನ ಒಕ್ಕೂಟ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮಾರ್ಗದರ್ಶನದಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಸಂಯೋಜನೆಯಲ್ಲಿ ದೀಪಾವಳಿ ಪ್ರಯುಕ್ತ ತುಳುನಾಡ ತುಡರ್ ಪರ್ಬ -2020
ಕಾರ್ಯಕ್ರಮದಂಗವಾಗಿ ಸಂಸ್ಥೆಯ ಮಹಿಳಾ ಸದಸ್ಯರಿಗೆ ರಂಗೋಲಿ ಸ್ಪರ್ಧೆ ನಡೆಯಿತು. 6 ತಂಡ ಭಾಗವಹಿಸಿತ್ತು. ಸುರತ್ಕಲ್
ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆ ಕಲಾ ಶಿಕ್ಷಕ ಸುಹಾಸ್ ನಾನಿಲ್ಮ ತ್ತು ಕೃಷ್ಣಾಪುರ ಸರಕಾರಿ ಪ.ಪೂ. ಕಾಲೇಜು ಉಪನ್ಯಾಸಕಿ ಪ್ರತಿಮಾ ಗಣೇಶ್ ಆಚಾರ್ಯ ಸ್ಪರ್ಧೆಯ ತೀರ್ಪುಗಾರರಾಗಿದ್ದರು. ಪಡುಪಣಂಬೂರು ಗ್ರಾಪಂ ಮಾಜಿ ಸದಸ್ಯ
ಸಂತೋಷ್ ಕುಮಾರ್, ಸಂಸ್ಥೆ ಗೌರವ ಅಧ್ಯಕ್ಷ ನಾರಾಯಣ ಜಿ.ಕೆ. ಕಾರ್ಯಕಾರಿ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ವಾಣಿ ಮಹೇಶ್, ಸದಸ್ಯರು ಉಪಸ್ಥಿತರಿದ್ದರು.
Kshetra Samachara
16/11/2020 10:52 pm