ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಒಳ್ಳೆಯ ಕಥೆ ಸಿಕ್ಕರೆ ಬಾಲಿವುಡ್ ನಲ್ಲಿ ನಟಿಸುವೆ; ಮಿಸ್ ಇಂಡಿಯಾ ಸಿನಿ ಶೆಟ್ಟಿ

ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಆಗಿರುವ ಬಗ್ಗೆ ಸಂತಸವಿದೆ. ಮುಂದಕ್ಕೆ ಮಿಸ್ ವರ್ಲ್ಡ್ ಆಗುವ ಗುರಿ ಹೊಂದಿದ್ದೇನೆ. ಇದಕ್ಕೆ ತಯಾರಿ ನಡೆಸುತ್ತಿದ್ದೇನೆ. ಉತ್ತಮ ಕಥೆ, ಸ್ಕ್ರಿಪ್ಟ್ ದೊರಕಿದ್ದಲ್ಲಿ ಬಾಲಿವುಡ್ ನಲ್ಲಿ ನಟಿಸುತ್ತೇನೆ ಎಂದು ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿರುವ ಸಿನಿ ಶೆಟ್ಟಿ ಹೇಳಿದರು.

ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಆದ ಬಳಿಕ ಮೊದಲ ಬಾರಿಗೆ ತಾಯ್ನಾಡಿಗೆ ಆಗಮಿಸಿದ ಸಿನಿ ಶೆಟ್ಟಿಯವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕುಟುಂಬದವರು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಕುಟುಂಬ ವರ್ಗ, ಏರ್‌ ಪೋರ್ಟ್‌ ಗೆ ಬಂದಿರುವ ಪ್ರಯಾಣಿಕರು ಅವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡು ಸಂತಸ ಪಟ್ಟರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸಿನಿ ಶೆಟ್ಟಿ, ನಾನು ಇನ್ನೂ ವಿದ್ಯಾರ್ಥಿನಿ. ಮೊದಲಾಗಿ ನಾನು ಸ್ನಾತಕೋತ್ತರ ಪದವಿ ಶಿಕ್ಷಣ ಪೂರೈಸಬೇಕು. ಫೆಮಿನಾ ಮಿಸ್ ಇಂಡಿಯಾ ಒಂದು ಬಹುದೊಡ್ಡ ಪ್ರಯಾಣ. ಇದು ನನಗೆ ಜೀವನದಲ್ಲಿ ಭರವಸೆ ಹಾಗೂ ವಿಶ್ವಾಸವನ್ನು ದೊರಕಿಸಿಕೊಟ್ಟಿತು ಎಂದರು.

ನನ್ನ ಹೆತ್ತವರ ಊರು ಉಡುಪಿ. ನನ್ನ ರಜಾದಿನಗಳನ್ನು ಉಡುಪಿಯ ಅಜ್ಜಿ ಮನೆಯಲ್ಲಿ ಕಳೆದಿದ್ದೆ. ಈ ಸಂದರ್ಭ ಮತ್ತೆ ಅಲ್ಲಿಗೆ ಬರುತ್ತಿರುವುದರಿಂದ ಸಂತಸಗೊಂಡಿದ್ದೇನೆ. ಸದ್ಯ ಮಾಡೆಲ್ ಆಗುವ ಉದ್ದೇಶವಿಲ್ಲ. ಐದು ವರ್ಷಗಳ ಕಾಲ ಫೈನಾನ್ಶಿಯಲ್ ಕ್ಷೇತ್ರದಲ್ಲಿ ದುಡಿಯುವ ಆಸಕ್ತಿ ಹೊಂದಿದ್ದೇನೆ. ಆ ಬಳಿಕ ಒಳ್ಳೆಯ ಅವಕಾಶ ಸಿಕ್ಕಲ್ಲಿ ಮಾಡೆಲ್ ಆಗುವ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭ ಸಿನಿ ಶೆಟ್ಟಿ ಅಪ್ಪಟ ಉಡುಪಿ ತುಳುವಿನಲ್ಲಿ ಮಾತನಾಡಿ, ನನ್ನನ್ನು ಈ ರೀತಿಯಲ್ಲಿ ಎಲ್ಲರೂ ಸ್ವಾಗತಿಸಿರುವುದು ಬಹಳ ಖುಷಿ ತಂದಿದೆ. ಮುಂದಕ್ಕೆ ನಾನು ಮಿಸ್ ವರ್ಲ್ಡ್ ಗೆ ತಯಾರಿ ನಡೆಸುತ್ತಿದ್ದೇನೆ. ಹಾಗಾಗಿ ನನಗೆ ಎಲ್ಲರ ಆಶೀರ್ವಾದ ಬೇಕು ಎಂದರು.

Edited By :
PublicNext

PublicNext

18/07/2022 09:16 pm

Cinque Terre

49.53 K

Cinque Terre

0

ಸಂಬಂಧಿತ ಸುದ್ದಿ