ಕೋಟ: ಸರಳ, ಸವ್ಯಸಾಚಿ ವ್ಯಕ್ತಿತ್ವ , ಸಾಧನೆ ಪರಿಗಣಿಸಿ ಈ ವರ್ಷ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ.ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
24/09/2022 02:41 pm