ಉಡುಪಿ: ಕರಾವಳಿಯಲ್ಲಿ ಸೌಹಾರ್ದಕ್ಕೆ ಧಕ್ಕೆ ತರುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಹೀಗಿದ್ದರೂ ಇಲ್ಲಿಯ ಜನರು ಸೌಹಾರ್ದಪ್ರಿಯರು ಎಂಬುದು ಸಾಬೀತಾಗುತ್ತಲೇ ಇರುತ್ತವೆ.
ಕಟಪಾಡಿ ಹಾಗೂ ಉದ್ಯಾವರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಹಿಂದೂ ಬಾಂಧವರ ಜೊತೆಗೆ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಬಾಂಧವರು ಪಾಲ್ಗೊಳ್ಳುವ ಮೂಲಕ ಸೌಹಾರ್ದತೆ ಮೆರೆದಿರುವುದು ಇದಕ್ಕೊಂದು ತಾಜಾ ಉದಾಹರಣೆ.
ಕಟಪಾಡಿಯ ಮೂಡಬೆಟ್ಟು ಸರ್ಕಾರಿ ಗುಡ್ಡೆ ಸಾರ್ವಜನಿಕ ಗಣೇಶ ಚತುರ್ಥಿಯ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಗ್ರಾಮದ ಮುಸ್ಲಿಂ ಬಾಂಧವರು ಸಿಹಿ ತಿಂಡಿ ಹಾಗೂ ತಂಪು ಪಾನೀಯ ಹಂಚಿ ಗಣೇಶೋತ್ಸವದ ಸಂಭ್ರಮಾಚರಣೆಯನ್ನು ಸೌಹಾರ್ದತೆಯಿಂದ ಆಚರಿಸಿದರು.
ಮತ್ತೊಂದೆಡೆ 25 ವರ್ಷಕ್ಕೂ ಅಧಿಕ ಇತಿಹಾಸವಿರುವ ಸಾರ್ವಜನಿಕ ಗಣೇಶೋತ್ಸವ ಸಮಿತಿ ಉದ್ಯಾವರ ಮತ್ತು ಫ್ರೆಂಡ್ಸ್ ಗಾರ್ಡನ್ ಅರೂರು ತೋಟ ಸಂಪಿಗೆ ನಗರದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಧರ್ಮಗುರುಗಳು ಮತ್ತು ಕ್ರೈಸ್ತ ಬಾಂಧವರು ಭಾಗವಹಿಸಿ ಸೌಹಾರ್ದತೆ ಮೆರೆದರು.
Kshetra Samachara
01/09/2022 02:35 pm