ಕಾಪು :ಮಿಸ್ ಇಂಡಿಯಾ ಸಿನಿ ಶೆಟ್ಟಿ ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ಬಳಿಕ ಪ್ರಥಮ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದು ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.
ಪ್ರಸ್ತುತ ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರಕ್ಕೆ ತಮ್ಮ ಮನೆಯ ವತಿಯಿಂದ 99 ಶಿಲಾ ಸೇವೆ ನೀಡುತ್ತಿದ್ದೇವೆ. ಮಾರಿಯಮ್ಮ ದೇವಿಯ ಭಕ್ತರೆಲ್ಲರೂ ಶಿಲಾ ಸೇವೆ ನೀಡುವ ಮೂಲಕ ಮಾರಿಗುಡಿಯ ಜೀರ್ಣೋದ್ಧಾರದಲ್ಲಿ ಕೈಜೋಡಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಸಿನಿ ಶೆಟ್ಟಿ ತಂದೆ ಸದಾನಂದ ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷದ ಕಾಪು ದಿವಾಕರ ಶೆಟ್ಟಿ, ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
PublicNext
20/07/2022 02:18 pm