ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೋಟಿ ಗೀತಾ ಲೇಖನ ಯಜ್ಞದೀಕ್ಷೆ ಅಭಿಯಾನಕ್ಕೆ ಪುತ್ತಿಗೆ ಶ್ರೀ ಚಾಲನೆ

ಉಡುಪಿ: ಪುತ್ತಿಗೆ ಮಠದ ಪೀಠಾಧಿಪತಿ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ನಾಲ್ಕನೇ ಪರ್ಯಾಯ ಪ್ರಯುಕ್ತ ಭಗವದ್ಗೀತಾ ಗ್ರಂಥವನ್ನು ಪ್ರತಿಯೊಬ್ಬರ ಮೂಲಕ ಬರೆಸುವಂತಹ ಕೋಟಿ ಗೀತಾ ಲೇಖನ ಯಜ್ಞ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಪ್ರಯುಕ್ತ ಐದು ತಂಡಗಳು ಅಭಿಯಾನವನ್ನು ನಡೆಸುತ್ತಿವೆ. ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ರಥಬೀದಿಯ ಪುತ್ತಿಗೆ ಮಠದಲ್ಲಿ ಕೋಟಿಗೀತಾ ಲೇಖನ ಅಂಗವಾಗಿ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಭಗವಂತ ಶ್ರೀ ಕೃಷ್ಣ ವ್ಯಕ್ತಿಯ ಪರ ಅಲ್ಲ. ತತ್ವದ ಪರ ಮತ್ತು ಸಜ್ಜನರ ಪಕ್ಷಪಾತಿ. ಹೀಗಾಗಿ ಭಗವದ್ಗೀತೆ ಯಾವುದೇ ಮತೀಯ ಗ್ರಂಥವಲ್ಲ. ಸನ್ಮತಿ ನೀಡುವ ಗ್ರಂಥ. ಪ್ರತಿಯೊಬ್ಬರೂ ಭಗವದ್ಗೀತೆಯ ಪರಿಜ್ಞಾನ ಹೊಂದುವುದು ಅಗತ್ಯ. ಜಗತ್ತಿನ ಎಲ್ಲ ಸಮಸ್ಯೆಗಳ ಮೂಲ ಅಹಂಕಾರ ಮತ್ತು ಮಮಕಾರ. ಎಲ್ಲವೂ ಭಗವಂತನ ಅಧೀನ ಎಂದು ತಿಳಿದರೆ ಮನುಷ್ಯನಿಗೆ ಅಹಂಕಾರ ಬರಲು ಸಾಧ್ಯವಿಲ್ಲ. ಹೀಗಾಗಿ ಸಮಸ್ಯೆಗಳಿಗೆ ಗೀತೆಯಲ್ಲಿ ಪರಿಹಾರವಿದೆ ಎಂದು ಶ್ರೀ ಹೇಳಿದರು.

Edited By : Somashekar
Kshetra Samachara

Kshetra Samachara

26/07/2022 08:18 pm

Cinque Terre

5.02 K

Cinque Terre

0

ಸಂಬಂಧಿತ ಸುದ್ದಿ