ಮಂಗಳೂರು: ಕಲಾವಿದರು ಹಾಗೂ ವ್ಯಾಪಾರಿಗಳಿಗೆ ಉತ್ತೇಜನ ನೀಡಲು ಜಿಲ್ಲಾಡಳಿತದಿಂದ ಜಿಲ್ಲೆಯ ಜನರಿಗೆ ವೀಕೆಂಡ್ ಮನೋರಂಜನೆ ನೀಡಲು ಯೋಜನೆ ರೂಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಆಯೋಜಿಸಲಾದ ಜಿಲ್ಲಾಧಿಕಾರಿ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ನಗರದ ಪ್ರಮುಖ ರಸ್ತೆಗಳಾದ ಕದ್ರಿ ಪಾರ್ಕ್ ಎದುರು ಹಾಗೂ ಕ್ಲಾಕ್‍ಟವರ್ ನಿಂದ ಎ.ಬಿ.ಶೆಟ್ಟಿ ಸರ್ಕಲ್ ರಸ್ತೆಯಲ್ಲಿ ವಾರಾಂತ್ಯ ರಸ್ತೆ ಬದಿ ಉತ್ಸವ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ವಾರಾಂತ್ಯದ ದಿನಗಳಲ್ಲಿ (ಶನಿವಾರ, ಭಾನುವಾರ) ನಿಗದಿತ ರಸ್ತೆಯುದ್ದಕ್ಕೂ ಸ್ಥಳೀಯ ಆಹಾರ, ಕರಕುಶಲ ವಸ್ತುಗಳು ಸೇರಿದಂತೆ ತಾತ್ಕಾಲಿಕ ವ್ಯಾಪಾರ ಮಳಿಗೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮಗಳ ಮೂಲಕ ಜನರಿಗೆ ಮನರಂಜನೆಯ ಜೊತೆಗೆ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ.
Kshetra Samachara
25/09/2021 07:43 am