ಕುಂದಾಪುರ: ಕರಾವಳಿಯ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಕರ್ನಾಟಕಕ್ಕೆ ಅಕ್ಟೋಬರ್ 2ನೇ ವಾರದಲ್ಲಿ ಹಿಂಗಾರು ಪ್ರವೇಶವಾಗಲಿದೆ. ಅಲ್ಲಿಯ ತನಕ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ ಮೇಲ್ಫ್ ಸುಳಿಗಾಳಿಯು ದಕ್ಷಿಣ ಕರಾವಳಿಯತ್ತ ಸಾಗಿದೆ. ಅದು ಸಮುದ್ರ ಮಟ್ಟದಿಂದ ಸುಮಾರು 3.5ಕಿ.ಮೀ ಎತ್ತರದಲ್ಲಿದೆ. ಅದೇ ರೀತಿ ಬಂಗಾಳ ಕೊಲ್ಲಿ ಪಶ್ಚಿಮ ಸಮುದ್ರ ಭಾಗದಲ್ಲಿ ಉಂಟಾಗಿದ್ದ ಮತ್ತೊಂದು ಮೇಲ್ಮೈ ಸುಳಿಗಾಳಿಯು ದುರ್ಬಲಗೊಂಡಿಲ್ಲ. ಈ ಕಾರಣದಿಂದ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
Kshetra Samachara
08/10/2022 02:54 pm