ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ತುಳು ಉಳಿಸಿ-ಬೆಳೆಸುವ ಸಂಘಟನೆಯ ಕಾರ್ಯ ಅಭಿನಂದನೀಯ: ಡಾ. ರಾಜಾರಾಮ್

ಮುಲ್ಕಿ: ಮುಲ್ಕಿ ಯುವವಾಹಿನಿ ಘಟಕ (ರಿ) ವತಿಯಿಂದ "ತುಳುವೆರೆ ತುಡರ್ ಪರ್ಬ"ಕಾರ್ಯಕ್ರಮ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಯುವವಾಹಿನಿ ((ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ. ರಾಜಾರಾಮ್ ಕೆಬಿ ಉದ್ಘಾಟಿಸಿ ಮಾತನಾಡಿ ತುಳುನಾಡು ಸರ್ವಧರ್ಮದ ಬೀಡಾಗಿದ್ದು ಮೌಲ್ಯಧಾರಿತ ಸಂದೇಶ ನೀಡುವ ಮೂಲಕ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಆಯೋಜಿಸುತ್ತಿರುವ ಯುವವಾಹಿನಿ ಕಾರ್ಯ ಅರ್ಥಪೂರ್ಣವಾಗಿದ್ದು ತುಳು ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯಕ್ರಮ ಅಭಿನಂದನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಭರತೇಶ್ ಅಮೀನ್ ಮಟ್ಟು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುರೋಹಿತರಾದ ಹರಿದಾಸಭಟ್ ಹೆಜಮಾಡಿ, ಲಯನ್ ಜಿಲ್ಲಾ ಉಪರಾಜ್ಯಪಾಲರಾದ ಡಾ. ಮೆಲ್ವಿನ್ ಡಿಸೋಜ, ಹಳೆಯಂಗಡಿ ಮಹಿಳಾ ಮಂಡಳಿ ಅಧ್ಯಕ್ಷೆ ರೇಷ್ಮಾಅಶ್ರಫ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ ಅಮೀನ್, ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿಲ್ಲವ ಸಂಘದ ಕಟ್ಟಡ ಸಮಿತಿ ಅಧ್ಯಕ್ಷರಾದ ವಿಠ್ಠಲ ಕೆ ಅಮೀನ್ ರವರನ್ನು ಸಾಧಕರ ನೆಲೆಯಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷರು ಹಾಗೂ ಸದಸ್ಯರನ್ನು ಗೌರವಿಸಲಾಯಿತು.

ಸಾರ್ವಜನಿಕರಿಗೆ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಮುಲ್ಕಿ ಯುವವಾಹಿನಿ ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ ಧನ್ಯವಾದ ಅರ್ಪಿಸಿದರು. ಮೋಹನ್ ಸುವರ್ಣ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ತುಳುನಾಡಿನ ಗೋ ಪೂಜೆ, ಹಾಗೂ ಬಲೀಯೇಂದ್ರ ಪೂಜೆ, ವಿಶಿಷ್ಟ ರೀತಿಯಲ್ಲಿ ನಡೆಯಿತು.

Edited By : PublicNext Desk
Kshetra Samachara

Kshetra Samachara

03/11/2021 10:25 pm

Cinque Terre

5.75 K

Cinque Terre

0