ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು:ಗ್ರಾಮೀಣ ಕ್ರೀಡಾಕೂಟಗಳಿಂದ ಸುಪ್ತವಾಗಿರುವ ಪ್ರತಿಭೆಗಳನ್ನು ಗುರುತಿಸಲು ಸಾಧ್ಯ:ಭಾಸ್ಕರ್ ಅಮೀನ್

ಮುಲ್ಕಿ: ಹಳೆಯಂಗಡಿಯ 10ನೇ ತೋಕೂರು ಫೇಮಸ್ ಯೂತ್ ಕ್ಲಬ್ (ರಿ) ನ 34ನೇ ವಾರ್ಷಿಕೋತ್ಸವದ ಪ್ರಯುಕ್ತ ವಾರ್ಷಿಕ ಕ್ರೀಡಾಕೂಟ ತೋಕೂರು ಗುತ್ತು ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ತೋಕೂರುಗುತ್ತು ಶಕುಂತಳಾ ಜೆ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ನ ಗೌರವಾಧ್ಯಕ್ಷ ಜಯ ಕೃಷ್ಣ ಜೆ. ಕೋಟ್ಯಾನ್ ಕ್ರೀಡಾ ಕೂಟಕ್ಕೆ ಶುಭವನ್ನು ಹಾರೈಸಿದರು.

ಫೇಮಸ್ ಯೂತ್ ಕ್ಲಬ್ ನ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರುರವರು ಮಾತನಾಡಿ ಗ್ರಾಮೀಣ ಕ್ರೀಡಾಕೂಟಗಳಿಂದ ಸುಪ್ತವಾಗಿರುವ ಪ್ರತಿಭೆಗಳನ್ನು ಹೊರಜಗತ್ತಿಗೆ ಪರಿಚಯಿಸಲು ಸಾಧ್ಯಎಂದರು. ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಭೋಜ ಕೋಟ್ಯಾನ್ ಮತ್ತು ಕಾರ್ಯದರ್ಶಿ ಹಿಮಕರ್ ಕೋಟ್ಯಾನ್ ಉಪಸ್ಥಿತರಿದ್ದರು ಮಹಮ್ಮದ್ ಶರೀಫ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

20/12/2021 03:31 pm

Cinque Terre

3.24 K

Cinque Terre

0