ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಮೃತರ ಬಡಕುಟುಂಬಗಳಿಗೆ ಹತ್ತು ಲಕ್ಷ ಪರಿಹಾರ ನೀಡಿ"

ಮಂಗಳೂರು: ಪರ್ಸೀನ್ ಬೋಟ್ ದುರಂತದಲ್ಲಿ ಮೃತಪಟ್ಟ ಬಡಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಸ್ಥಳೀಯರು ಕಾರ್ಪೊರೇಟರ್ ಮುನೀಬ್ ಬೆಂಗರೆ ನೇತೃತ್ವದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಒತ್ತಾಯಿಸಿದರು. ಮೃತದೇಹಗಳ ಅಂತಿಮ ದರ್ಶನಕ್ಕೆ ಆಗಮಿಸಿದ ಸಂದರ್ಭ ಸ್ಥಳೀಯರು ತಮ್ಮ ಬೇಡಿಕೆ ಮುಂದಿರಿಸಿದರು. ಅಲ್ಲದೆ, ರಕ್ಷಣಾ ಕಾರ್ಯಾಚರಣೆ ವೇಳೆ ಕೋಸ್ಟ್ ಗಾರ್ಡ್ ನಿರ್ವಹಿಸಿದ ಕಾರ್ಯ ವೈಖರಿ ಬಗ್ಗೆಯೂ ಸ್ಥಳೀಯರು ಸಚಿವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು. ಇನ್ನೆರಡು ಮೃತದೇಹ ಸಿಗುವವರೆಗೆ ಮೀನುಗಾರಿಕೆ ಸ್ಥಗಿತಗೊಳಿಸಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್ ಸ್ಥಳೀಯರನ್ನು ಸಮಾಧಾನ ಪಡಿಸುವ ಪ್ರಯತ್ನ ನಡೆಸಿದರು.

Edited By : Manjunath H D
Kshetra Samachara

Kshetra Samachara

02/12/2020 03:48 pm

Cinque Terre

30.36 K

Cinque Terre

1