ದ.ಕ.ಜಿಲ್ಲೆಯು ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗಳಿಂದ ಉದ್ವಿಗ್ನ ಸ್ಥಿತಿಯಲ್ಲಿತ್ತು. ಇದೀಗ ಸಹಜ ಸ್ಥಿತಿಯತ್ತ ಮರುಳುತ್ತಿದ್ದಂತೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಐಜಿ ದೇವಜ್ಯೋತಿ ರೇ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್., ದ.ಕ.ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಾಣೆ, ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್, ಮಂಗಳೂರು ಉಪ ಪೊಲೀಸ್ ಆಯುಕ್ತ ಅಂಶು ಕುಮಾರ್, ದ.ಕ.ಜಿಲ್ಲಾ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ಸಭೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಅವಲೋಕನ ಮಾಡಲಾಗುತ್ತಿದೆ. ಮತ್ತೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.
ಈ ಸಭೆಗೂ ಮುನ್ನ ಎಡಿಜಿಪಿ ಅಲೋಕ್ ಕುಮಾರ್ ಅವರು ಸುರತ್ಕಲ್ ಹಾಗೂ ಬಜ್ಪೆ ಪರಿಸರದ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
PublicNext
04/08/2022 11:28 am