ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ "ಜಿಲ್ಲಾಧಿಕಾರಿಯವರ ನಡೆ ಹಳ್ಳಿಯ ಕಡೆ" ಗ್ರಾಮ ವಾಸ್ತವ್ಯವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆ ಆಯುಜಿಸಲಾಗಿದ್ದು ಗ್ರಾಮಸ್ಥರ ಸಹಕಾರ ಮುಖ್ಯ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಮಾತನಾಡಿ ಅಧಿಕಾರಿಗಳು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಶ್ರಮಿಸಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಬಗ್ಗೆ ಗಮನಕ್ಕೆ ಬಂದಿದ್ದು ಮರಳುಗಾರಿಕೆಯಿಂದ ಕೆಟ್ಟು ಹೋಗಿರುವ ರಸ್ತೆ ಬಗ್ಗೆ ಈಗಾಗಲೇ 3 ಕೋಟಿ ಅನುದಾನ ಇರಿಸಲಾಗಿದ್ದು ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಬಗ್ಗೆ ಗಮನ ಹರಿಸಲಾಗುವುದು ಎಂದರು.
ಸಭೆಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಣೆ , ನೂತನ ಅಂಗನವಾಡಿ ಹಾಗೂ ಆರೋಗ್ಯ ಕೇಂದ್ರಕ್ಕೆ ಆದೇಶ ಪತ್ರ ನೀಡಲಾಯಿತು
ಬಳಿಕ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿಗಳು ನೂತನ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕೇಂದ್ರಗಳಿಗೆ ತೆರಳಿ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು
ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಮುಲ್ಕಿ ತಹಶಿಲ್ದಾರ್ ಗುರುಪ್ರಸಾದ್ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಪಿಡಿಒ ಪ್ರಕಾಶ್ ಸ್ವಾಗತಿಸಿದರು.
Kshetra Samachara
20/08/2022 05:56 pm