ಇದೇ ತಿಂಗಳ 12 ರಂದು ಮೀಸಲಾತಿಗಾಗಿ ಆಗ್ರಹಿಸಿ ದಲಿತಪರ ಸಂಘಟನೆಗಳಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ನಡೆಯಲಿದೆ ಎಂದು ದಲಿತ ಮುಖಂಡ ಸುಂದರ್ ಮಾಸ್ತರ್ ಹೇಳಿದ್ದಾರೆ.
ಸುದ್ದಿಗೋಷ್ಠಿ ಬಳಿಕ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು , ದಲಿತರಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಹೆಚ್ಚಿಸಬೇಕು ಎಂಬುದಾಗಿ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ.ಆದರೆ ಸರ್ಕಾರವು ಅವರ ವರದಿಯನ್ನು ಪರಿಶೀಲನೆಗಾಗಿ ಬೇರೆ ನ್ಯಾಯಾಧೀಶರಿಗೆ ವರ್ಗಾಯಿಸಿದೆ. ಈ ಕ್ರಮ ಸರಿಯಲ್ಲ. ಕಳೆದ 145 ದಿನಗಳಿಂದ ದಲಿತರ ಮೀಸಲಾತಿಗಾಗಿ ಆಹೋರಾತ್ರಿ ಪ್ರತಿಭಟನೆ ನಡೆಯುತ್ತಿದ್ದರೂ ಈ ಸರಕಾರಕ್ಕೆ ಕೇಳಿಸುತ್ತಿಲ್ಲ. ಇದನ್ನು ವಿರೋಧಿಸಿ ಮೀಸಲಾತಿಗಾಗಿ ಆಗ್ರಹಿಸಿ ಜುಲೈ 12ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ದಲಿತ ಮುಖಂಡ ಸುಂದರ ಮಾಸ್ತರ್ ಹೇಳಿದ್ದಾರೆ.
PublicNext
02/07/2022 03:55 pm