ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಮೂಡುಬಿದಿರೆಯಲ್ಲಿ ರಾಜ್ಯಪಾಲರಿಂದ ಸಾವಿರ ಕಂಬದ ಬಸದಿ, ಸಿದ್ಧಾಂತ ದರ್ಶನ

ಮೂಡುಬಿದಿರೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ 18 ಜೈನ ದೇವಾಲಯಗಳಲ್ಲಿ ಪ್ರಮುಖವಾದ ಸಾವಿರ ಕಂಬಗಳ ಬಸದಿ 'ತ್ರಿಭುವನ ತಿಲಕ ಚೂಡಾಮಣಿ ದೇವಾಲಯ'ಕ್ಕೆ ಇಂದು (ಸೋಮವಾರ) ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು.

ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ರಾಜ್ಯಪಾಲರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮೂಡಬಿದರೆ ಪುರಸಭೆ ಅಧ್ಯಕ್ಷ ಪ್ರಸಾದ್, ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

14/03/2022 08:44 pm

Cinque Terre

6.14 K

Cinque Terre

0

ಸಂಬಂಧಿತ ಸುದ್ದಿ