ಉಡುಪಿ: ದೇಶದಾದ್ಯಂತ ಪಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಸಾಸ್ತಾನ ಟೋಲ್ ಗೇಟ್‌ನಲ್ಲಿ ಸ್ಥಳೀಯರಿಗೆ ಈ ಹಿಂದೆ ಇದ್ದ ಟೋಲ್ ಶುಲ್ಕ ವಿನಾಯತಿಯನ್ನು ಮುಂದುವರಿಸುವಂತೆ ಆಗ್ರಹಿಸಿ ಫೆಬ್ರವರಿ 22 (ಸೋಮವಾರ) ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬಂದ್ ಕರೆ ನೀಡಲಾಗಿದೆ.
ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಹೆದ್ದಾರಿ ಜಾಗೃತಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಫೆಬ್ರವರಿ 22ರಂದು ಕೋಟ ಜಿಪಂ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದರೊಂದಿಗೆ ಅಂದು ಬೆಳಿಗ್ಗೆ 9.30ರಿಂದ ಟೋಲ್ ಪ್ಲಾಜಾದಲ್ಲಿ ಶಾಂತಿಯುತವಾಗಿ ಬೃಹತ್ ಜನಸಮೂಹದೊಂದಿಗೆ ಪ್ರತಿಭಟನೆ ನಡೆಸಲಾಗುವುದು.
ಈ ಸಭೆಯಲ್ಲಿ ಹೆದ್ದಾರಿ ಜಾಗೃತಿ ಸಮಿತಿಯ ಪ್ರತಾಪ್ ಶೆಟ್ಟಿ, ವಿಠಲ್ ಪೂಜಾರಿ, ಆಲ್ವಿನ್ ಅಂದ್ರಾದೆ, ಕಾರ್ಕಡ ರಾಜು ಪೂಜಾರಿ, ವಿನಯ್ ಕಬ್ಯಾಡಿ, ಪ್ರಶಾಂತ್ ಶೆಟ್ಟಿ, ರಾಜೇಶ್ ಉಪಸ್ಥಿತರಿದ್ದರು.
Kshetra Samachara
18/02/2021 08:46 am