ಪಡುಬಿದ್ರೆ: ಕೇಂದ್ರ ಸರ್ಕಾರದ ಬೆಲೆ ಏರಿಕೆ ಮತ್ತು ಕೃಷಿ ಮಸೂದೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಿಂದ ಉತ್ತರ ಕನ್ನಡ ಜಿಲ್ಲೆಯ ವರೆಗೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಇಂದು ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಏಳು ದಿನಗಳ ಕಾಲ 108 ಕಿಲೋಮೀಟರ್ ಪಾದಯಾತ್ರೆ ನಡೆಯಲಿದ್ದು,ಇದರಲ್ಲಿ ಕಾಂಗ್ರೆಸ್‌ನ ರಾಜ್ಯ ರಾಷ್ಟ್ರ ಮಟ್ಟದ ನಾಯಕರು ಭಾಗಿಯಾಗುತ್ತಿದ್ದಾರೆ. ಪಡುಬಿದ್ರೆಯಲ್ಲಿ ಕಾಲ್ನಡಿಗೆ ಜಾಥಾದಲ್ಲಿ ಸಿದ್ದರಾಮಯ್ಯ ಜೊತೆಯಲ್ಲಿ ಮಾಜಿ ಸಚಿವ ಯುಟಿ ಖಾದರ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯಕುಮಾರ ಸೊರಕೆ ಭಾಗಿಯಾಗಿದ್ದಾರೆ.
ಸಂಸದ ನಾಸಿರ್, ರಮಾನಾಥ ರೈ, ಪ್ರತಾಪ್ ಚಂದ್ರ ಶೆಟ್ಟಿ ಕೂಡ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ರೈತ ವಿರೋಧಿ ಮಸೂದೆ, ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಜಾಥಾ ಹಮ್ಮಿಕೊಂಡಿದೆ.
Kshetra Samachara
22/02/2021 02:47 pm