ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ಕುರಿತು ಇಂದಿನಿಂದ ಮಂಗಳೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 2ರವರೆಗೆ ಮಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಚಾಲಕ/ಸವಾರರ ಮೇಲೆ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಹೀಗಾಗಿ ಮಂಗಳೂರು ನಗರದಲ್ಲಿ ವಾಹನಗಳನ್ನು ಚಲಾಯಿಸುವ ವೇಳೆ ಅಗತ್ಯ ದಾಖಲೆಪತ್ರಗಳು, ಇನ್ಸೂರೆನ್ಸ್, ಎಮಿಷನ್ ಟೆಸ್ಟ್ ಇರುವುದು ಕಡ್ಡಾಯ. ಅದರ ಜೊತೆಗೆ ಕಾರುಗಳಲ್ಲಿ ಟಿಂಟ್ ಗ್ಲಾಸ್ ಅಳವಡಿಸುವುದು, ದ್ವಿಚಕ್ರ ವಾಹನಗಳಲ್ಲಿ ಹೆಲ್ಮೆಟ್ ಬಳಸುವುದು ಕಡ್ಡಾಯ. ಇಂದಿನಿಂದ ಅಕ್ಟೋಬರ್ 2 ವರೆಗೆ ಪ್ರತಿದಿನ ಒಂದೊಂದು ವಿಭಾಗದ ತಪಾಸಣೆ ನಡೆಸಲು ಮಂಗಳೂರು ಪೊಲೀಸ್ ಇಲಾಖೆ ಸಜ್ಜಾಗಿದೆ. ಅದು ಯಾವುದು ಎಂಬುದರ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ
Kshetra Samachara
27/09/2021 09:22 am