ಕುಂದಾಪುರ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು ಇಂದು ಗ್ರಾಮಸ್ಥರ ಸಮಸ್ಯೆ ಆಲಿಸುವ ಉದ್ದೇಶದಿಂದ ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕೈಗೊಂಡರು. ಹೀಗಾಗಿ ಇಲ್ಲಿ ಬಹುಕಾಲದಿಂದ ಈಡೇರದ ಸಮಸ್ಯೆಗಳು ಬಗೆಹರಿಯುವ ನಿರೀಕ್ಷೆ ಮೂಡಿದೆ.
ಬೆಳಿಗ್ಗೆ 11ರ ಸುಮಾರಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳ ಜೊತೆ ಗ್ರಾಮಕ್ಕೆ ಆಗಮಿಸಿದರು. ಅಲ್ಲಿ ಕೂರ್ಮಾ ರಾವ್ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಸ್ವಾಗತಿಸಿದರು.ಜಡ್ಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಆವಶ್ಯಕವಾಗಿ ಈಡೇರಲೇಬೇಕಾದ ಅಗತ್ಯತೆಗಳ ಬಗ್ಗೆ ಗ್ರಾಮಸ್ಥರು, ಜನಪ್ರತಿನಿಧಿಗಳಿಂದ ಡಿ.ಸಿ. ಮಾಹಿತಿ ಸಂಗ್ರಹಿಸಿದರು.
ಗ್ರಾಮದ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿದರು. ಅನಾರೋಗ್ಯವುಂಟಾದರೆ ಸರಕಾರಿ ಆಸ್ಪತ್ರೆಗೆ ಕಿ.ಮೀ. ಗಟ್ಟಲೆ ಅಲೆದಾಟ, ಒಂದೆಡೆ ಡೀಮ್ಡ್ ಫಾರೆಸ್ಟ್‌ನಿಂದ ಹಕ್ಕುಪತ್ರ ಸಿಗುತ್ತಿಲ್ಲ. ಮತ್ತೊಂದೆಡೆ ಕೃಷಿಗೆ ಕಾಡು ಪ್ರಾಣಿಗಳ ಹಾವಳಿ, ಕೈಕೊಡುವ ವಿದ್ಯುತ್ ಸಮಸ್ಯೆ ಹೀಗೆ ನಾನಾ ಸಮಸ್ಯೆಗಳನ್ನು ಜನರು ಹೇಳಿಕೊಂಡರು. ಜಿಲ್ಲಾಧಿಕಾರಿಗಳು ಇಲ್ಲಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
Kshetra Samachara
16/10/2021 04:45 pm