ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವುದು ಅಭಿಯಾನದ ಉದ್ದೇಶ: ಉಡುಪಿ ಡಿ.ಸಿ

ಕುಂದಾಪುರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಸ್ಪಂದಿಸುವುದರ ಜೊತೆಗೆ ಸರಕಾರದ ಯೋಜನೆಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ" ಅಭಿಯಾನದ ಮುಖ್ಯ ಉದ್ದೇಶ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಹೇಳಿದರು.

ಅವರು ಜಡ್ಕಲ್ ಗ್ರಾಮದ ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಸರಕಾರದ ಸೌಲಭ್ಯಗಳಿಂದ ವಂಚಿತರಾದ ವಿಕಲಚೇತನರು, ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳ ಸಮಸ್ಯೆ ಪರಿಹಾರಕ್ಕೆ ಈ ಅಭಿಯಾನದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ ಎಂದರು.

ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭಾರತಿ, ಜಡ್ಕಲ್ ಗ್ರಾಪಂ ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷ ಲಕ್ಷ್ಮಣ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಸಂಧ್ಯಾ ರಮೇಶ್, ಶೇಖರ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

18/10/2021 04:00 pm

Cinque Terre

4.01 K

Cinque Terre

0

ಸಂಬಂಧಿತ ಸುದ್ದಿ