ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇಂದ್ರದಿಂದ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ; ಕಾಂಗ್ರೆಸ್ ನಿಂದ ಡಿಸಿಗೆ ಮನವಿ

ಮಂಗಳೂರು:ಕೇರಳ ರಾಜ್ಯ ಸರಕಾರ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಲು ಸಮಾಜ ಸುಧಾರಕ, ಸಂತ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಆಯ್ಕೆ ಮಾಡಿದೆ. ಆದರೆ ಕೇಂದ್ರ ಸರಕಾರ ಇದನ್ನ ನಿರಾಕರಿಸಿದೆ. ಈ ನಿರಾಕರಣೆ ಖಂಡಿಸಿ ಮತ್ತು ಸರಕಾರದ ನಿರ್ಧಾರವನ್ನು ಪುನರ್ ಪರಿಶೀಲಿಸಿ, ನಾರಾಯಣ ಗುರುಗಳ ಸ್ತಬ್ಧಚಿತ್ರ ಭಾಗವಹಿಸಲು ಅನುಮತಿಯನ್ನು ನೀಡಬೇಕೆಂದು ಆಗ್ರಹಿಸಿ, ಇಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರ ಮುಖೇನ ಕೇಂದ್ರ ಸರಕಾರಕ್ಕೆ, ರಾಜ್ಯ ಯುವ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.

ಈ ಸಂದರ್ಭ ಶಾಸಕ ಯು ಟಿ ಖಾದರ್, ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ,ಹರೀಶ್ ಕುಮಾರ್, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

17/01/2022 05:18 pm

Cinque Terre

3.26 K

Cinque Terre

0

ಸಂಬಂಧಿತ ಸುದ್ದಿ