ಪುತ್ತೂರು: ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡಿರುವ ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಗಿರೀಶ್ ನಂದನ್ ಫೆ.7ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಿರ್ಗಮಿತ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅವರು ಅಧಿಕಾರ ಹಸ್ತಾಂತರಿಸಿದರು.
ಕೆ.ಎ.ಎಸ್. ಅಧಿಕಾರಿಯಾಗಿರುವ ಬೆಂಗಳೂರು ಮೂಲದ ಗಿರೀಶ್ ನಂದನ್ ಅವರು ಹಾಸನ ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದರು.
Kshetra Samachara
07/02/2022 04:48 pm