ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ ಜಿಲ್ಲೆಅಪರ ಜಿಲ್ಲಾಧಿಕಾರಿಯಾಗಿ ಕೃಷ್ಣ ಮೂರ್ತಿ ಹೆಚ್.ಕೆ. ನೇಮಕ

ಪುತ್ತೂರು: ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣಮೂರ್ತಿ ಹೆಚ್.ಕೆ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಪುತ್ತೂರಿನಲ್ಲಿ ಹಿರಿಯ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ಮಂಗಳೂರು ವಿದ್ಯುತ್ ಪ್ರಸರಣ ನಿಗಮ(ಮೆಸ್ಕಾಂ)ನ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು.

ಇದೀಗ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

12/02/2022 07:30 am

Cinque Terre

8.3 K

Cinque Terre

0

ಸಂಬಂಧಿತ ಸುದ್ದಿ