ಸುರತ್ಕಲ್ : ಸಾಮಾಜಿಕ ಹೋರಾಟಗಾರ ಆಸಿಫ್ ಆಪದ್ಬಾಂಧವ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಎನ್ ಐಟಿಕೆ ಅಕ್ರಮ ಟೋಲ್ ಗೇಟ್ ವಿರುದ್ಧದ ಅಹೋರಾತ್ರಿ ಧರಣಿಯು ಸೋಮವಾರ ಎಂಟನೇ ದಿನಕ್ಕೆ ಕಾಲಿರಿಸಿದೆ.
ಪ್ರತಿಭಟನೆಯ ಮಧ್ಯೆ ಕಳೆದ ಎರಡು ದಿನಗಳಿಂದ ಆಸಿಫ್ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದ್ದು, ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಆಸಿಫ್ ರವರನ್ನು ಆಸ್ಪತ್ರೆಗೆ ತೆರಳುವಂತೆ ಮನವಿ ಮಾಡಿದರೂ ನಿರಾಕರಿಸಿದ ಆಸಿಫ್ ನನಗೆ ನ್ಯಾಯ ಸಿಗುವವರೆಗೂ ಈ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದರು, ಬಳಿಕ ವೈದ್ಯರನ್ನು ಸ್ಥಳಕ್ಕೆ ಕರೆಸಿ ಆಸಿಫ್ ರವರನ್ನು ಪರೀಕ್ಷಿಸಿ ಚಿಕಿತ್ಸೆ ನೀಡಲಾಯಿತು.
ಸಾಯಂಕಾಲ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಟ್ಯೂಬ್ ಲೈಟ್ ಒಡೆದು ಗಾಜಿನ ಚೂರುಗಳ ಮೇಲೆ ಮಲಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಸಾಮಾಜಿಕ ಕಾರ್ಯಕರ್ತರು ಲೇಖಕರೂ ಮರವಂತೆ ಪ್ರಕಾಶ್ ಪಾಡಿಯಾರ್, ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್, ಕಾಪು ವಲಯಾಧ್ಯಕ್ಷ ನಿಝಾಮ್ ಪಡುಬಿದ್ರಿ, ಮತ್ತಿತರರು ಪ್ರತಿಭಟನೆಗೆ ಸಾಥ್ ನೀಡಿದರು.
Kshetra Samachara
14/02/2022 07:07 pm