ಉಡುಪಿ: ಉಡುಪಿಯ ಮಠದ ಬೆಟ್ಟು ಪರಿಸರದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಮೂವತ್ತಕ್ಕೂ ಹೆಚ್ಚು ಮನೆಗಳ ಬಾವಿ ನೀರು ಕಲುಷಿತಗೊಂಡಿದೆ. ಈ ಸಂಬಂಧ ನಿನ್ನೆ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಕಟಿಸಿತ್ತು.
ಇವತ್ತು ಜಿಲ್ಲಾಧಿಕಾರಿಯವರನ್ನು ಈ ಬಗ್ಗೆ ಸಂಪರ್ಕಿಸಿದಾಗ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ತಕ್ಷಣ ನಾನು ನಗರಸಭೆ ಮತ್ತು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಜೊತೆ ಮಾತನಾಡುತ್ತೇನೆ. ಅಲ್ಲಿ ಆಗಿರುವ ಸಮಸ್ಯೆ ಬಗ್ಗೆ ತಕ್ಷಣ ಗಮನ ಹರಿಸಲು ಸೂಚನೆ ನೀಡುತ್ತೇನೆ ಎಂದು ಹೇಳಿದ್ದಾರೆ.
Kshetra Samachara
26/04/2022 10:35 pm