ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸೈಂಟ್ ಮೇರೀಸ್ ಸುರಕ್ಷತೆ ಬಗ್ಗೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಐವರು ಪ್ರವಾಸಿಗರು ಮೃತಪಟ್ಟ ಬಳಿಕ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿಯ ಸಭೆ ಕರೆದು ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.

ಮುಂದೆ ಇಂತಹ ಅನಾಹುತ ಸಂಭವಿಸಿದರೆ ದ್ವೀಪಕ್ಕೆ ಪ್ರವಾಸಿಗರ ಪ್ರವೇಶವನ್ನೇ ನಿಷೇಧಿಸುವುದಾಗಿ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಉಡುಪಿ ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಅಧ್ಯಕ್ಷತೆಯಲ್ಲಿ ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ರಮೇಶ್ ಕಾಂಚನ್ ಪ್ರಶ್ನೆಗೆ ಪೌರಾಯುಕ್ತರು ಉತ್ತರಿಸಿದರು.

ಅಪಾಯಕಾರಿ ಸ್ಥಳದಲ್ಲಿ ತಡೆಬೇಲಿ ಹಾಕಲಾಗಿದೆ. ಇದನ್ನು ಭೇದಿಸಿ ಸಮುದ್ರಕ್ಕೆ ಇಳಿದವರಿಗೆ ದಂಡ ವಿಧಿಸಲಾಗುತ್ತಿದೆ. ದ್ವೀಪದ ನಾಲ್ಕು ಕಡೆ ಸುರಕ್ಷಿತ ಸ್ಥಳದಲ್ಲಿ ಸೆಲ್ಫೀ ಪಾಯಿಂಟ್ ಗುರುತಿಸಲಾಗಿದೆ. ಪ್ರವೇಶ ದ್ವಾರದಲ್ಲಿಯೇ ಪ್ರವಾಸಿಗರಿಗೆ ಸಮುದ್ರದ ಅಪಾಯದ ಅರಿವು ಮೂಡಿಸಲಾಗುತ್ತದೆ. ದ್ವೀಪದಲ್ಲಿ ಒಮ್ಮೆಗೆ 500 ಕ್ಕಿಂತ ಹೆಚ್ಚು ಪ್ರವಾಸಿಗರು ಇರಬಾರದೆಂಬ ಷರತ್ತುಗಳನ್ನು ಗುತ್ತಿಗೆದಾರರಿಗೆ ವಿಧಿಸಲಾಗಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.

Edited By : Manjunath H D
Kshetra Samachara

Kshetra Samachara

28/04/2022 07:50 pm

Cinque Terre

10.07 K

Cinque Terre

0

ಸಂಬಂಧಿತ ಸುದ್ದಿ