ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ.ಜಿಲ್ಲೆಯ ಮರಳು ಗ್ರಾಹಕರ ಕುಂದುಕೊರತೆಗಳ ಆಲಿಕೆಗೆ ಸಹಾಯವಾಣಿ ಆರಂಭ : ಡಿಸಿ ಸೂಚನೆ

ಮಂಗಳೂರು: ದ.ಕ. ಜಿಲ್ಲೆಯ ಮರಳು ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ತುರ್ತಾಗಿ ಸಹಾಯವಾಣಿಯೊಂದನ್ನು ಪ್ರಾರಂಭಿಸುವಂತೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಯವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಬಿ.ಎಂ. ಲಿಂಗರಾಜ್ ಅವರಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜೂ.17ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಳು ಕುರಿತಂತೆ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು, ಅವುಗಳ ಬಗೆಹರಿಸಲು ಅನುಕೂಲವಾಗುವಂತೆ ಆದಷ್ಟು ಶೀಘ್ರದಲ್ಲೇ ಜಿಲ್ಲೆಯಲ್ಲಿ ಸಹಾಯವಾಣಿಯೊಂದನ್ನು ಪ್ರಾರಂಭಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳೂರಿನ ಫಲ್ಗುಣಿ ನದಿ ಪಾತ್ರದ ಆದ್ಯಪಾಡಿ ಅಣೆಕಟ್ಟು ಹಾಗೂ ಬಂಟ್ವಾಳದ ನೇತ್ರಾವತಿ ನದಿ ಪಾತ್ರದ ಶಂಭೂರು ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಹೂಳು ತೆಗೆಯುವ ಕೆಲಸ ಆರಂಭವಾಗಿದೆ. ಈಗಾಗಲೇ ಶೇಖರಣೆಗೊಂಡಿರುವ ಮರಳನ್ನು ಗ್ರಾಹಕರಿಗೆ ಸೂಕ್ತ ಸಮಯಲ್ಲಿ ತಲುಪಿಸುವ ವ್ಯವಸ್ಥೆ ಮಾಡಬೇಕು.

ಮರಳು ಮಿತ್ರ ಆ್ಯಪ್ ಅಭಿವೃದ್ಧಿಗೊಂಡಿದ್ದು, ಮರಳಿನ ಗುಣಮಟ್ಟವನ್ನು ಗ್ರಾಹಕರು ಆನ್‍ಲೈನ್ ಮೂಲಕವೂ ಪರಿಶೀಲಿಸಬಹುದು. ಆ ಬಳಿಕವೇ ಮರಳನ್ನು ಮುಂಗಡವಾಗಿ ಕಾಯ್ದಿರಿಸಿಕೊಳ್ಳಬಹುದು. ಈ ಬಗ್ಗೆ ಬಗ್ಗೆ ವ್ಯಾಪಕ ಪ್ರಚಾರವಾಗಿ ಜನಸಾಮಾನ್ಯರಿಗೆ ಉಪಯೋಗವಾಗಬೇಕು ಎಂದರು.

Edited By : Nirmala Aralikatti
Kshetra Samachara

Kshetra Samachara

17/06/2022 10:43 pm

Cinque Terre

4.24 K

Cinque Terre

0

ಸಂಬಂಧಿತ ಸುದ್ದಿ