ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಚೇರ್ಕಾಡಿಯಲ್ಲಿ ಡಿ.ಸಿ ಗ್ರಾಮವಾಸ್ತವ್ಯ-ಅಹವಾಲು ಸ್ವೀಕಾರ,ಸವಲತ್ತು ವಿತರಣೆ

ಬ್ರಹ್ಮಾವರ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಇಂದು ಚೇರ್ಕಾಡಿಯಲ್ಲಿ ಗ್ರಾಮವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಧಿಕಾರಿ ಕೂರ್ಮಾ ರಾವ್ ಚೇರ್ಕಾಡಿ ಯುವಕ ಮಂಡಲದ ವಠಾರದಲ್ಲಿ ಬೆಳಗ್ಗೆ ವಿವಿಧ ಸವಲತ್ತು ವಿತರಣೆ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸ್ಥಳೀಯರ ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಪ್ರಯತ್ನ ಮಾಡಿದರು.

ಗ್ರಾಮ ವಾಸ್ತವ್ಯಕ್ಕೆ ಪೂರ್ವಭಾವಿಯಾಗಿ ಕಾಲೇಜಿನ 15 ವಿದ್ಯಾರ್ಥಿಗಳ ತಂಡ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ವೆ ನಡೆಸಿ, ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಬೇಕಾಗಿರುವ ಸವಲತ್ತುಗಳನ್ನು ಪಟ್ಟಿ ಮಾಡಿದ್ದರು.ಈ ದತ್ತಾಂಶಗಳ ಆಧಾರದ ಮೇಲೆ ಅಗತ್ಯವಿರುವ ಕುಟುಂಬಗಳಿಗೆ ಪಡಿತರ ಚೀಟಿ, ವಾಸ್ತವ್ಯ ಪ್ರಮಾಣ ಪತ್ರ ಮೊದಲಾದ ಸವಲತ್ತು ವಿತರಣೆ ಹಾಗೂ ಸಮೀಕ್ಷೆ ಆಧಾರದಲ್ಲಿ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಚರ್ಚೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದ ಮತ್ತು ಇತರ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ನಡೆಯಿತು.

Edited By : Nagesh Gaonkar
Kshetra Samachara

Kshetra Samachara

18/06/2022 04:06 pm

Cinque Terre

6.12 K

Cinque Terre

0

ಸಂಬಂಧಿತ ಸುದ್ದಿ