ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಕರಾವಳಿ ಜಿಲ್ಲೆ ಅಭಿವೃದ್ಧಿಗೆ 35 ಕೋಟಿ ಅನುದಾನ ಮೀಸಲು"

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ‌ಅಭಿವೃದ್ಧಿಗೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲು ಈ ಬಾರಿಯ ಆಯವ್ಯಯದಲ್ಲಿ ಗರಿಷ್ಠ 35 ಕೋಟಿ ರೂ. ಅನುದಾನ ಮೀಸಲಿರಿಸಿದೆ. ಇನ್ನೂ 10 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಮುಂದಿನ ದಿನಗಳಲ್ಲಿ ಸರಕಾರದ ಆಯವ್ಯಯದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಲಾಲ್ ಬಾಗ್ ನಲ್ಲಿರುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಾತನಾಡಿದ ಅವರು, 2021-22 ರಲ್ಲಿ ಮೂರೂ ಜಿಲ್ಲೆಗಳಲ್ಲಿ 229 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇವುಗಳ ಪೈಕಿ 151 ಕಾಮಗಾರಿಗಳ ಸಂಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗಿದೆ. ಉಳಿದ 78 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ. 2022-23ನೇ ಸಾಲಿನಲ್ಲಿ 207 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಗ್ರಾಮೀಣ ಪ್ರದೇಶಗಳಲ್ಲಿ ಅವಶ್ಯವಿರುವ ತೂಗು ಸೇತುವೆ, ಕಿರುಸೇತುವೆ, ಶಾಲಾ ಕಟ್ಟಡ, ಅಂಗನವಾಡಿ ನಿರ್ಮಾಣ, ಕಾರ್ಕಳದ ಥೀಂ ಪಾರ್ಕ್ ಅಭಿವೃದ್ಧಿ ಕಾಮಗಾರಿ, ಉದ್ಯಾನವನ ಅಭಿವೃದ್ಧಿ, ರಸ್ತೆ, ಬಸ್ ತಂಗುದಾಣ ಅಭಿವೃದ್ಧಿ, ಮಾರುಕಟ್ಟೆ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಾಣ, ಸಮುದಾಯ ಭವನ, ರಂಗಮಂದಿರ, ರುದ್ರಭೂಮಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದೆ.

ಅಲ್ಲದೆ, ಕರಾವಳಿ ಮೀನುಗಾರರ ಸಬಲೀಕರಣ, ಸ್ಥಳೀಯ ಉತ್ಪನ್ನ ಪ್ರೋತ್ಸಾಹಕ್ಕೆ ತರಬೇತಿ, ಮೇಳ ಆಯೋಜನೆ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅನುಷ್ಠಾನ ಮುಂತಾದ ಕಾಮಗಾರಿ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದರು.

Edited By : Manjunath H D
Kshetra Samachara

Kshetra Samachara

20/07/2022 08:29 pm

Cinque Terre

4.26 K

Cinque Terre

0

ಸಂಬಂಧಿತ ಸುದ್ದಿ