ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಮನೆಬಾಗಿಲಿಗೆ ಜನನ/ಮರಣ ಪ್ರಮಾಣ ಪತ್ರ ಸೇವೆಗೆ ಚಾಲನೆ

ಮೂಡುಬಿದಿರೆ: ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಹಾಗೂ ಪುರಸಭೆ ಮೂಡುಬಿದಿರೆ ಇದರ ಸಹಯೋಗದಲ್ಲಿ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ಮನೆಬಾಗಿಲಿಗೆ ಜನನ/ಮರಣ ಪ್ರಮಾಣ ಪತ್ರಗಳನ್ನು ತಲುಪಿಸುವ ಸೇವೆಯ ಒಡಂಬಡಿಕೆಗೆ ಮೂಡುಬಿದಿರೆ ಪುರಸಭಾ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಡಾ. ಏಂಜೆಲ್ ರಾಜ್ ಮಾತನಾಡಿ, ಜನನ ಮತ್ತು ಮರಣ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ನೂತನ ಸೇವೆಯಿಂದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಬಗ್ಗೆ ಹಾಗೂ ಜನತೆಗೆ ಈ ಸೇವೆಯನ್ನು ತಲುಪಿಸುವಲ್ಲಿ ಮೂಡುಬಿದಿರೆ ಪುರಸಭೆಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಪುರಸಭೆ ಮುಖ್ಯಾಧಿಕಾರಿ ಇಂದು.ಎಂ ಮಾತನಾಡಿ ಈ ಒಡಂಬಡಿಕೆಗೆ ಪುರಸಭೆಯ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಧರ್ ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Edited By : Shivu K
Kshetra Samachara

Kshetra Samachara

27/07/2022 09:00 am

Cinque Terre

10.75 K

Cinque Terre

0

ಸಂಬಂಧಿತ ಸುದ್ದಿ