ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತಿನ 2021-22ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ತಪಾಸಣೆ ಕುರಿತ ಜಮಾಬಂದಿ ಕಾರ್ಯಕ್ರಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಹಾಯಕ ತೋಟಗಾರಿಕಾ ಅಧಿಕಾರಿ ಪವಿತ್ರಾ, ಸಾರ್ವಜನಿಕ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಜನರಿಗೆ ಉತ್ತರಾದಾಯಿತ್ವ, ಜನರ ಸಹಭಾಗಿತ್ವದಲ್ಲಿ ಯಾವುದೇ ಸರಕಾರದ ಯೋಜನೆಗಳು ಸಾಫಲ್ಯ ಕಾಣಲು ಸಾಧ್ಯ ಅನುಷ್ಠಾನಗೊಂಡ ಕಾಮಗಾರಿಗಳು ಹಾಗೂ ಕಡತಗಳ ಪರಿಶೀಲನೆ ನಡೆಸಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಾಮಗಾರಿಗಳ ಸ್ಥಳ ಭೇಟಿ ನಡೆಸಿ ಹಾಗೂ ಜಮಾಬಂದಿ ತಂಡ ಗ್ರಾಮ ಪಂಚಾಯತಿನಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳು ಹಾಗೂ ಪಂಚಾಯತ್‌ನ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ ಪೂಜಾರಿ, ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಸೋಜಾ, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ನರೇಗಾ ಫಲಾನುಭವಿಗಳು ಪಂಚಾಯತ್ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಾರ್ಯದರ್ಶಿ ವಿಜಯಾ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಪ್ರಸ್ತಾವಿಸಿ ಕಾರ್ಯಕ್ರಮ ನಿರ್ವಹಿಸಿದರು.
Kshetra Samachara
03/09/2022 08:37 pm