ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಾಳೆ ( ಸೆ.15) ಉಡುಪಿಯಲ್ಲಿ ಸುಕನ್ಯಾ ಸಮೃದ್ಧಿ ಮಹೋತ್ಸವ

ಉಡುಪಿ: ಉಡುಪಿ ಅಂಚೆ ವಿಭಾಗದ ವತಿಯಿಂದ ಸೆ.15ರಂದು ಸಂಜೆ 4 ಗಂಟೆಗೆ ನಗರದ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಸುಕನ್ಯಾ ಸಮೃದ್ಧಿ ಮಹೋತ್ಸವವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಜನಸುರಕ್ಷಾ ಯೋಜನೆ, ಉಳಿತಾಯ ಯೋಜನೆ, ಜೀವವಿಮೆ, ಗ್ರಾಮೀಣ ಜೀವವಿಮೆ, ಐ.ಪಿ.ಪಿ.ಬಿ, ಸಿ.ಎಸ್.ಸಿ ಮುಂತಾದ ಯೋಜನೆಗಳ ಮಾಹಿತಿ ಶಿಬಿರ, ಆಧಾರ್‌ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಂಚೆಚೀಟಿ ಪ್ರದರ್ಶನ ನಡೆಯಲಿದೆ.

ಸುಕನ್ಯಾ ಸಮೃದ್ಧಿ ಮಹೋತ್ಸವ ಆಚರಿಸಲು ಆಯ್ಕೆಗೊಂಡ ರಾಷ್ಟ್ರದ 75 ನಗರಗಳಲ್ಲಿ ಉಡುಪಿ ಅಂಚೆ ವಿಭಾಗದ ಉಡುಪಿ ಕೂಡಾ ಒಂದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

14/09/2022 02:39 pm

Cinque Terre

2.26 K

Cinque Terre

0

ಸಂಬಂಧಿತ ಸುದ್ದಿ