ಸಮುದ್ರದಲ್ಲಿ ಗಸ್ತು ತಿರುಗುವ ಕರಾವಳಿ ಕಾವಲು ಪಡೆಗೆ ಹೆಚ್ಚಿನ ಸೌಲಭ್ಯಗಳಿಲ್ಲ. ಸಿಬ್ಬಂದಿ ಕೊರತೆಯೂ ಇದೆ. ಕರಾವಳಿ ಕಾವಲು ಪಡೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಅತ್ಯಾಧುನಿಕ ಸುಸಜ್ಜಿತ ಬೋಟ್, ಡ್ರೋನ್ ಕ್ಯಾಮೆರಾ, ಲೈಫ್ ಜಾಕೆಟ್ ಸೇರಿದಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಸಮುದ್ರ ಮಾರ್ಗದ ಕಳ್ಳಸಾಗಣಿಕೆ ತಡೆಯುವ ನಿಟ್ಟಿನಲ್ಲಿ ಹಾಗೂ ಬೇರೆ ರಾಜ್ಯದವರು ನಮ್ಮ ರಾಜ್ಯದ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸದಂತೆ ಕಠಿಣ ಕಾನೂನು ಕ್ರಮ ಕೈಗೊಂಡು ನಮ್ಮ ಮೀನುಗಾರರ ಹಿತ ರಕ್ಷಣೆ ಕಾಪಾಡಬೇಕು ಎಂದು ಶಾಸಕ ರಘುಪತಿ ಭಟ್ ವಿಧಾನಸಭೆ ಅಧಿವೇಶನದಲ್ಲಿ ಗಮನ ಸೆಳೆದರು. ಶೀಘ್ರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರನ್ನು ಒತ್ತಾಯಿಸಿದರು.
PublicNext
20/09/2022 04:28 pm